ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 9ರವರೆಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಕರ್ನಾಟಕದ ಬೆಂಗಳೂರು, ಮಲೆನಾಡು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವೆಡೆ ಜೂನ್ 9ರವರೆಗೂ ಮಳೆ ಸುರಿಯುವ ಸಾಧ್ಯತೆಯಿದೆ. ರಾಜ್ಯಕ್ಕೆ ಈಗಾಗಲೇ ಮುಂಗಾರು ಪ್ರವೇಶವಾಗಿದ್ದು, ಇಂದಿನಿಂದ 3 ದಿನ ಮಳೆ ಹೆಚ್ಚಾಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 9 ರವರೆಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.