3 ಸರ್ಕಾರ ಬದಲಾದರೂ ಶಾಲೆಗಳ ಪರಿಸ್ಥಿತಿ ಬದಲಾಗಿಲ್ಲ: ಹೈಕೋರ್ಟ್

ಶುಕ್ರವಾರ, 23 ಜೂನ್ 2023 (14:08 IST)
ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಕೊರತೆಗಳಿರುವ ಬಗ್ಗೆ 2013 ರಿಂದಲೂ ಸ್ವಯಂಪ್ರೇರಿತ ಪಿಐಎಲ್ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್ ಶಾಲೆಗಳಲ್ಲಿನ ಮೂಲ ಸೌಕರ್ಯ ಕೊರತೆ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದೆ.
 
ಕಾಲಮಿತಿಯಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಹೈಕೋರ್ಟ್ ಈ ಹಿಂದೆಯೇ ನಿರ್ದೇಶನ ನೀಡಿತ್ತು. ಹೈಕೋರ್ಟ್ ಆದೇಶದ ಅನುಸಾರ ಕೈಗೊಂಡ ಕ್ರಮಗಳ ಬಗ್ಗೆ ಸರ್ಕಾರ ಇಂದು ವರದಿ ಸಲ್ಲಿಸಿದೆ.

ವರದಿಯ ಜೊತೆಗೆ ಸಲ್ಲಿಸಲಾಗಿದ್ದ ಶೌಚಾಲಯಗಳ ಫೋಟೋ ಗಮನಿಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಹಾಗೂ ನ್ಯಾಯಮೂರ್ತಿ ಎಂ.ಜಿ.ಎಸ್. ಕಮಲ್ ರವರಿದ್ದ ವಿಭಾಗೀಯ ಪೀಠ ಶಾಲೆಗಳಲ್ಲಿ ನೀರು, ಶೌಚಾಲಯಗಳ ದುಸ್ಥಿತಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಶೌಚಾಲಯಗಳ ಫೋಟೋ ನಮ್ಮ ಆತ್ಮಸಾಕ್ಷಿಗೆ ಆಘಾತ ನೀಡುತ್ತಿದೆ. ಶೌಚಾಲಯಗಳು ದುಸ್ಥಿತಿಯಲ್ಲಿವೆ, ಗಿಡಬಳ್ಳಿ ಬೆಳೆದಿವೆ. ಅಧಿಕಾರಿಗಳು ತಮ್ಮ ಮನೆ ಶೌಚಾಲಯವನ್ನೂ ಹೀಗೇ ಇಟ್ಟುಕೊಳ್ಳುತ್ತಾರಾ? ಸರ್ಕಾರ ಸಲ್ಲಿಸಿರುವ ವರದಿ ಬೇಸರದಾಯಕ, ಆಘಾತಕಾರಿಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ