ಕೊರೊನಾಗೆ ಬಲಿಯಾದವರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ
ಕೋವಿಡ್ – 19 ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡಲಾಗಿದೆ.
ಕೋವಿಡ್ ಕ್ವಾರೈಂಟೈನ್ ಕೇಂದ್ರದ ಮೇಲ್ವಿಚಾರಕರಾಗಿ ಜಿಲ್ಲಾಡಳಿತದ ಆದೇಶದಂತೆ ಕರ್ತವ್ಯನಿರತರಾಗಿದ್ದ ಹಾನಗಲ್ ತಾಲ್ಲೂಕು ಮೊರಾಜಿ೯ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಮಲ್ಲಪ್ಪ ಫಕೀರಪ್ಪ ತಳಗಡಿ ಅವರು ಕೋವಿಡ್ ಸೋಂಕಿಗೆ ತುತ್ತಾಗಿದ್ದರು.
ಕಳೆದ ಆಗಸ್ಟ್ 19ರಂದು ಮೃತರಾಗಿದ್ದರು. ನಿಯಮಾನುಸಾರ ಮೃತರ ಕುಟುಂಬಕ್ಕೆ ಪರಿಹಾರವಾಗಿ ₹ 30 ಲಕ್ಷ ಹಾಗೂ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಮಂಜೂರು ಮಾಡಿದೆ ಎಂದು ಅವರು ತಿಳಿಸಿದ್ದಾರೆ.