ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿಗೆ 318 ಕ್ಯೂಸೆಕ್ ನೀರು ಬಿಡುಗಡೆ

ಬುಧವಾರ, 6 ಸೆಪ್ಟಂಬರ್ 2023 (12:06 IST)
ಬೀದರ್ : ಸತತ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯ ಜೀವನಾಡಿ ಕಾರಂಜಾ ಜಲಾಶಯ ಬಹುತೇಕ ಭರ್ತಿಯಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿಗೆ ಒಂದು ಗೇಟ್ ಮೂಲಕ ಒಟ್ಟು 318 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

ಒಟ್ಟು 7.69 ಟಿಎಂಸಿ ಸಾಮರ್ಥ್ಯದ ಕಾರಂಜಾ ಜಲಾಶಯದಲ್ಲಿ ಈಗಾಗಲೇ 7.51 ಟಿಎಂಸಿ ನೀರು ಸಂಗ್ರಹವಾಗಿದ್ದು ಬಹುತೇಕ ಭರ್ತಿಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ