ಸರಕಾರದಿಂದ ವೇತನಕ್ಕೆ 322 ಕೋಟಿ ರೂ. ಹಣ ಬಿಡುಗಡೆ
ಸರಕಾರವು ಸಾರಿಗೆ ನಿಗಮಗಳ ಸಿಬ್ಬಂದಿಗಳ ಎಪ್ರಿಲ್ ತಿಂಗಳ ವೇತನಕ್ಕೆ 322 ಕೋಟಿ ರೂ. ಹಣ ಬಿಡುಗಡೆ ಮಾಡಿದೆ.
ಈ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಶೋಕ ಪಾಟೀಲ ಹಾಗೂ ಪ್ರಧಾನ ಕಾರ್ಯದರ್ಶಿ ಪಿ.ವೈ.ನಾಯಕ್ ಸನ್ಮಾನಿಸಿ, ಗೌರವಿಸಿದ್ದಾರೆ.