ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
339 ಅರಣ್ಯ ರಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 16.03.2020 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದೆ. 15.04.2020ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದ್ದು, ಕನಿಷ್ಟ 18 ರಿಂದ ಗರಿಷ್ಟ 32 ವರ್ಷದೊಳಗಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳು, ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ಮತ್ತು ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಸಾಮಾನ್ಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ದ್ವಿತೀಯ ಪಿಯುಸಿಯಲ್ಲಿಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ಸಿದ್ಧಪಡಿಸಿ, ಹುದ್ದೆಗಳಿಗೆ ಅನುಪಾತವಾರು 1:20 ಅನುಪಾತದಲ್ಲಿ ದೇಹದಾರ್ಢ್ಯತೆ, ದೈಹಿಕ ತಾಳ್ವಿಕೆ ಮತ್ತು ದೈಹಿಕ ಕಾರ್ಯ ಸಮರ್ಥತೆ, ಲಿಖಿತ ಪರೀಕ್ಷೆಗೆ ಹಾಜರಾಗಲು ಆಯ್ಕೆಪಟ್ಟಿ ಪ್ರಕಟಿಸಲಾಗುತ್ತದೆ. ನಂತರ ಈ ಎಲ್ಲಾ ಪರೀಕ್ಷೆಗಳಲ್ಲಿ ಪಾಸ್ ಆದ ಅಭ್ಯರ್ಥಿಗಳನ್ನು ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಅರಣ್ಯ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ಮೂಲಕ ಅರ್ಜಿ ಸಲ್ಲಿಸಬಹುದು.