ರಾಜ್ಯದಲ್ಲಿ 348 ಕೊರೊನಾ ಸೋಂಕು ಪತ್ತೆ

ಮಂಗಳವಾರ, 7 ಜೂನ್ 2022 (21:53 IST)

ರಾಜ್ಯದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 348 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 39, 53,937ಕ್ಕೆ ಏರಿಕೆಯಾಗಿದೆ.

ಇಂದು 311 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 2,478 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ 339 ಹೊಸ ಪ್ರಕರಣ ಪತ್ತೆಯಾಗಿದ್ದು, 277 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟಾರೇ 2,390 ಸಕ್ರಿಯ ಪ್ರಕರಣ ದಾಖಲಾಗಿದೆ. ಹಾಸನ, ಕೋಲಾರ, ಮೈಸೂರು, ರಾಯಚೂರು, ತುಮಕೂರು, ಉತ್ತರ ಕನ್ನಡದಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದೆ.

ಉಳಿದೆಲ್ಲಾ ಕಡೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಒಟ್ಟು 16,474 ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೂ 66,48,7860 ಪರೀಕ್ಷೆ ನಡೆಸಲಾಗಿದ್ದು, ರಾಜ್ಯದಲ್ಲಿ ಸೋಂಕಿನ ಪ್ರಮಾಣ ಶೇ, 2.11 ರಷ್ಟಿದ್ದು, ಮರಣ ಪ್ರಮಾಣ ಶೂನ್ಯವಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ