ದೇಶದಲ್ಲಿ ಕಳೆದ 24 ಗಂಟೆಯಲ್ಲಿ 39,070 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 491 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,19,34,455ಕ್ಕೆ ಏರಿಕೆಯಾದರೆ, ಒಟ್ಟಾರೆ ಸಾವಿನ ಸಂಖ್ಯೆ 4,27,862ಕ್ಕೆ ಜಿಗಿತ ಕಂಡಿದೆ.
ಒಟ್ಟಾರೆ ಗುಣಮುಖಿತರ ಸಂಖ್ಯೆ 3,10,99,771ಕ್ಕೆ ಜಿಗಿತ ಕಂಡಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4,06,822ಕ್ಕೆ ಏರಿಕೆಯಾಗಿದೆ.