ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ 3ನೇಸಂಚು ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ H.D. ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಬಿಜೆಪಿ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಮುಲ್ ಜತೆ ನಂದಿನಿ ವಿಲೀನ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಮೊದಲನೇ ಸಂಚು, ಮೊಸರಿನ ಪ್ಯಾಕೆಟ್ ಮೇಲೆ ಹಿಂದಿಯ ದಹಿ ಪದ ಮುದ್ರಣ ಎರಡನೇ ಸಂಚು. ಆದರೆ, ಕನ್ನಡಿಗರ ತೀವ್ರ ವಿರೋಧದಿಂದ ಎರಡೂ ಸಂಚು ವಿಫಲವಾಯಿತು. ಇದೀಗ 3ನೇ ಸಂಚು ಸಫಲಗೊಳಿಸಲು ಅಮುಲ್ ಮೂಲಕ ಕೇಂದ್ರ ಸರ್ಕಾರ ಹೊರಟಿದೆ. ಹಿಂಬಾಗಿಲ ಮೂಲಕ ಒಳ ನುಗ್ಗುತ್ತಿದೆ.. ತನ್ನ ಏಕೈಕ ಪ್ರತಿ ಸ್ಪರ್ಧಿ ನಂದಿನಿಗೆ ಕರ್ನಾಟಕದಲ್ಲೇ ಅಡ್ಡಿ ಮಾಡಬೇಕೆನ್ನುವುದು ಅಮುಲ್ ದುರಾಲೋಚನೆ. ಒಂದು ದೇಶ, ಒಂದು ಅಮುಲ್, ಒಂದೇ ಹಾಲು, ಒಂದೇ ಗುಜರಾತ್ ಎನ್ನುವುದು ಕೇಂದ್ರ ಸರ್ಕಾರದ ಅಧಿಕೃತ ನೀತಿಯಂತಿದೆ. ಅದಕ್ಕೆ ಅಮುಲ್ಗೆ ಒತ್ತಾಸೆಯಾಗಿ ನಿಂತು KMF ಕತ್ತು ಹಿಚುಕುತ್ತಿದೆ. ಈಗ ಅಮುಲ್ ಹಿಂಬಾಗಿಲ ಮೂಲಕ ಒಳನುಗ್ಗುತ್ತಿದೆ. ಆಪೋಶನ ತೆಗೆದುಕೊಳ್ಳುವುದು ಖಚಿತ ಹೈನುಗಾರಿಕೆಯ ಮೂಲ ಉತ್ಪನ್ನ ಹಾಲನ್ನು ತನ್ನ ಬ್ರ್ಯಾಂಡ್ನಲ್ಲಿಯೇ ಕರ್ನಾಟಕದಲ್ಲಿಯೇ ಮಾರಲು ಹೊರಟಿರುವ ಅಮುಲ್, ನಂದಿನಿಯನ್ನು ಆಪೋಶನ ತೆಗೆದುಕೊಳ್ಳುವುದು ಖಚಿತ ಎಂದು HDK ಆಕ್ರೋಶ ಹೊರಹಾಕಿದ್ದಾರೆ.