ಗೃಹಲಕ್ಷ್ಮಿ’ಗೆ 4,600 ಕೋಟಿ ಬಿಡುಗಡೆ

ಶುಕ್ರವಾರ, 15 ಸೆಪ್ಟಂಬರ್ 2023 (21:04 IST)
ಗೃಹಲಕ್ಷ್ಮೀ ಯೋಜನೆಗಾಗಿ ಸರ್ಕಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 4,600ಕೋಟಿಯನ್ನ ಬಿಡುಗಡೆ ಮಾಡಿದೆ. ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕಾಗಿ 2023-24ನೇ ಸಾಲಿಗೆ 17,500 ಕೋಟಿ ರೂಪಾಯಿಯನ್ನ ನಿಗದಿ ಪಡಿಸಲಾಗಿತ್ತು. ಈ ಹಿನ್ನೆಲೆ ರಾಜ್ಯ ಸರ್ಕಾರ ಮೊದಲ ಕಂತಿನ‌ ಹಣವನ್ನ‌ ಇಲಾಖೆಗೆ ಬಿಡುಗಡೆ ಮಾಡಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಅವಧಿಗಾಗಿ 4,600 ಕೋಟಿ ಅನುದಾನವನ್ನ ಬಿಡುಗಡೆ ಮಾಡಲಾಗಿದ್ದು, ಇಲಾಖೆ‌ ಮೊದಲ‌ ಕಂತಿನಲ್ಲಿ 4,375ಕೋಟಿ ಹಣ ಬಿಡುಗೆಡೆ ಮಾಡಲು ಮನವಿ ಮಾಡಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ