ರಾಜ್ಯದಲ್ಲಿ ಇಂದಿನಿಂದ 4 ದಿನ ಮಳೆ
ಕರ್ನಾಟಕದ ಬೆಂಗಳೂರು, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಮಳೆ ಮುಂದುವರೆಯಲಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದಿನಿಂದ ನವೆಂಬರ್ 6ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೊಮ್ಮೆ ಗುಡುಗು – ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ. ತಾಪಮಾನದಲ್ಲಿಯೂ ವ್ಯತ್ಯಾಸಗಳಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ ತಗ್ಗುಪ್ರದೇಶ, ರಾಜಕಾಲುವೆ ಅಕ್ಕಪಕ್ಕದಲ್ಲಿ ವಾಸ ಮಾಡುವವರು ಎಚ್ಚರದಿಂದಿರಿ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.