ನೋಯ್ಡಾದಲ್ಲಿ ಲಿಫ್ಟ್​ ಕುಸಿದು 4 ಮಂದಿ ಸಾವು

ಶನಿವಾರ, 16 ಸೆಪ್ಟಂಬರ್ 2023 (13:50 IST)
ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ  ಭಾರೀ ಅಪಘಾತ ಸಂಭವಿಸಿದೆ. ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್ ಕುಸಿದು ಬಿದ್ದಿದೆ. ಈ ಅವಘಡದಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಲಭಿಸಿದ ತಕ್ಷಣ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿದೆ. ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಈ ಘಟನೆ ಬಿಸ್ರಖ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಈ ಅಪಘಾತದಲ್ಲಿ ಕೆಲವರು ಗಾಯಗೊಂಡಿದ್ದಾರೆ, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಮ್ರಪಾಲಿ ಗ್ರೂಪ್‌ನ ಈ ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ ಬೀಳಲು ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತರೆಲ್ಲರೂ ಕೂಲಿ ಕಾರ್ಮಿಕರು ಎನ್ನಲಾಗಿದೆ. ಲಿಫ್ಟ್ ಕುಸಿತದಿಂದ ಸಂಭವಿಸಿದ ಅಪಘಾತದ ಬಗ್ಗೆ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ