ದೇಶದಲ್ಲಿ 40,134 ಮಂದಿಗೆ ಸೋಂಕು; 422 ಸಾವು

ಸೋಮವಾರ, 2 ಆಗಸ್ಟ್ 2021 (15:07 IST)
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 40,134 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 422 ಮಂದಿ ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,16,95,958ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 4,24,773ಕ್ಕೆ ಜಿಗಿತ ಕಂಡಿದೆ.
ಒಂದು ದಿನದಲ್ಲಿ 36,946 ಸೋಂಕಿತರು ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,08,57,467ಕ್ಕೆ ಏರಿಕೆಯಾದರೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ 4,13,718ಕ್ಕೆ ಜಿಗಿತ ಕಂಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ