ಹುಬ್ಬಳ್ಳಿಯಲ್ಲಿ ಹಿಂಸಾಚಾರ: 48 ಮಂದಿ ಅರೆಸ್ಟ್, 10 ಪೊಲೀಸರಿಗೆ ಗಾಯ
ಕಿಡಿಗೇಡಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಪ್ರಚೋದನಕಾರಿ ಪೋಸ್ಟ್ ನಿಂದ ಹಳೇ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ 48 ಮಂದಿಯನ್ನು ಬಂಧಿಸಲಾಗಿದ್ದು, 10 ಪೊಲೀಸರಿಗೆ ಗಾಯಗಳಾಗಿವೆ.
ಶನಿವಾರ ರಾತ್ರಿ ನಡೆದ ಘರ್ಷಣೆ ಹಿನ್ನೆಲೆಯಲ್ಲಿ ಪೊಲೀಸ್ ಇನ್ ಸ್ಪೆಕ್ಟರ್ ಸೇರಿದಂತೆ 10 ಮಂದಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿಂಸಾಚಾರ ನಡೆದ ಸ್ಥಳದಲ್ಲಿನ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು 48 ಮಂದಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ. ಬಂಧನದ ವೇಳೆ ಪೋಷಕರು ನಮ್ಮ ಮಕ್ಕಳನ್ನು ಬಂಧಿಸದಂತೆ ಗೋಗರೆದಿದ್ದಾರೆ.
ಘಟನೆ ಸಂಬಂಧ ಪೊಲೀಸರು 6 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಮತ್ತಷ್ಟು ಜನರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.