ಮನೆ ಕುಸಿದು 45 ಕುರಿಗಳ ಸಾವು..!
ನಿನ್ನೆ ರಾತ್ರಿ ಸಕ್ಕರೆನಾಡು ಮಂಡ್ಯ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದ್ದು ಕೆರೆ, ಕಟ್ಟೆ, ನದಿಗಳು ಉಕ್ಕಿ ಹರಿಯುತ್ತಿವೆ. ಇನ್ನು ನಿನ್ನೆಯಿಂದ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ನಿನ್ನೆ ರಾತ್ರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿದಿದ್ದು ಜನ ಜೀವನ ಅಸ್ತವ್ಯಸ್ತಗೊಂಡು ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ರಾತ್ರಿ ಸುರಿದ ಭಾರಿ ಮಳೆಗೆ ನಗರದ ರಸ್ತೆಗಳು ಕಾಲುವೆಯಂತಾಗಿ ಜನರು ಮತ್ತು ವಾಹನ ಸವಾರರು ಪರದಾಡುವಂತಾಗಿತ್ತು.. ಉಮ್ಮಡಹಳ್ಳಿ ಗ್ರಾಮದಲ್ಲಿ ಯಶೋದಮ್ಮ ಎಂಬುವರ ಮನೆ ಕುಸಿದು ಕೊಟ್ಟಿಗೆಯಲ್ಲಿದ್ದ 45 ಕುರಿಗಳು ಮಣ್ಣಿನಡಿಯಲ್ಲಿ ಸಿಲುಕಿ ಸಾವನ್ನಪ್ಪಿವೆ. 45 ಕುರಿಗಳ ಸಾವಿನಿಂದ ಬಡ ಕುಟುಂಬ ಕಂಗಾಲಾಗಿದ್ದು, ಪರಿಹಾರಕ್ಕಾಗಿ ತಾಲೂಕು ಆಡಳಿತಕ್ಕೆ ಮನವಿ ಮಾಡಿದ್ದಾರೆ.