ಅಗಸರು, ಕ್ಷೌರಿಕರಿಗೆ ಸರಕಾರದಿಂದ 5,000 ರೂ. ಪರಿಹಾರ

ಮಂಗಳವಾರ, 16 ಜೂನ್ 2020 (19:53 IST)
ಅಗಸರು ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ಕಾರ್ಮಿಕರಿಗೆ ಒಂದು ಬಾರಿ 5000 ರೂ.ಗಳ ಪರಿಹಾರವನ್ನು ಸರಕಾರ ವಿತರಿಸುತ್ತಿದೆ.

ಕೊರೋನಾ ವೈರಸ್ (ಕೋವಿಡ್-19)ರ ಲಾಕ್‍ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಮೂಲಕ ಅಗಸರು ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ಕಾರ್ಮಿಕರಿಗೆ ಒಂದು ಬಾರಿ 5000 ರೂ.ಗಳ ಪರಿಹಾರ ವಿತರಿಸಲಾಗುತ್ತಿದೆ. ಇದಕ್ಕಾಗಿ ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಉಪವಿಭಾಗದ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.

 ಅಗಸ, ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್‍ನಲ್ಲಿ ಅನ್‍ಲೈನ್ ಅರ್ಜಿ ಸಲ್ಲಿಸಬೇಕು. ನಂತರ ಫಲಾನುಭವಿಗಳ ಅರ್ಜಿ ಪರಿಶೀಲಿಸಿ ಆಧಾರ ಸಂಖ್ಯೆಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಡಿ.ಬಿ.ಟಿ. ಮೂಲಕ ಪರಿಹಾರವನ್ನು ವರ್ಗಾಯಿಸಲಾಗುತ್ತದೆ. 

ಕರ್ನಾಟಕದಲ್ಲಿ ಅಗಸ ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ವಲಸೆ ಕಾರ್ಮಿಕರು (ಕುಟುಂಬದಲ್ಲಿ ಒಬ್ಬರಿಗೆ ಮಾತ್ರ)  ಪರಿಹಾರ ಪಡೆಯಲು ಅರ್ಹರು. ಫಲಾನುಭವಿಗಳ ವಯೋಮಿತಿ 18 ರಿಂದ 65 ವರ್ಷದೊಳಗಿರಬೇಕು. ಕರ್ನಾಟಕ ರಾಜ್ಯದಲ್ಲಿ ಬಿ.ಪಿ.ಎಲ್. ಕಾರ್ಡ್ ಹೊಂದಿರಬೇಕು. ಕಡ್ಡಾಯವಾಗಿ ಆಧಾರ್ ಸಂಖ್ಯೆ ಲಿಂಕ್ ಆಗಿರುವ ಬ್ಯಾಂಕ್ ಖಾತೆ ಹೊಂದಿರಬೇಕು.

ಫಲಾನುಭವಿಗಳು ಪೂರಕ ದಾಖಲೆಗಳಾದ ಅಗಸ, ಕ್ಷೌರಿಕ ವೃತ್ತಿ ನಿರ್ವಹಿಸುತ್ತಿರುವ ಕುರಿತು ನಿಗದಿತ ನಮೂನೆಯಲ್ಲಿ ಅಧಿಕಾರಿಗಳಿಂದ ಪಡೆದ ಉದ್ಯೋಗ ಧೃಡಿಕರಣ ಪತ್ರ, ನಿಗದಿತ ನಮೂನೆಯಲ್ಲಿ ಸ್ವಯಂ ಘೋಷಣೆ, ಬಿ.ಪಿ.ಎಲ್ ಕಾರ್ಡ್, ಆಧಾರ್ ಕಾರ್ಡ್, ಜನ್ಮ ದಿನಾಂಕ ದಾಖಲೆ ಹಾಗೂ ಪಾಸ್ ಪೋರ್ಟ್ ಅಳತೆ ಇತ್ತೀಚಿನ ಭಾವಚಿತ್ರದೊಂದಿಗೆ ಆನ್‍ಲೈನ್ ಮೂಲಕ ಜೂನ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ