ಗಡಿ ಜಿಲ್ಲೆಯಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಶುಕ್ರವಾರ ಮಧ್ಯಾಹ್ನ 5.2 ರಷ್ಟು ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ.
ಶುಕ್ರವಾರ ಮಧ್ಯಾಹ್ನ 2.52 ಸುಮಾರಿಗೆ ಜಮ್ಮು ಕಾಶ್ಮೀರ, ಪಾಕಿಸ್ತಾನ ಮತ್ತು ಆಫ್ಘಾನಿಸ್ತಾನ ಭಾಗದಲ್ಲಿ ಭೂಕಂಪನ ಸಂಭವಿಸಿದ್ದು, ಪಶ್ಚಿಮ ಆಫ್ಘಾನಿಸ್ತಾನದಲ್ಲಿ ಭೂಕಂಪನ ಕೇಂದ್ರಿತವಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು ಕಾಶ್ಮೀರದಿಂದ 230ಕಿ.ಮೀ.ದೂರದಲ್ಲಿ ಭೂಕಂಪನ ತೀವ್ರತೆ ಹೆಚ್ಚಾಗಿ ಕಂಡು ಬಂದಿದ್ದು, ಜನರು ಭಯದಿಂದ ಮನೆಯಿಂದ ಹೊರಗೆ ಬಂದಿದ್ದಾರೆ. ಆದರೆ ಇದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.