5 ದಿನ ರಾಜ್ಯಾದ್ಯಂತ ಭಾರೀ ಮಳೆ: 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಬುಧವಾರ, 18 ಮೇ 2022 (14:40 IST)
ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪೂರ್ವ ಮತ್ತು ಪಶ್ಚಿಮ ಸಮುದ್ರದಲ್ಲಿ ಚಂಡಮಾರುತ ಸೃಷ್ಟಿಯಾಗಿರುವ ಕಾರಣ ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇನ್ನೂ 5 ದಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮಂಗಳವಾರ 110 ರಾತ್ರಿ ಮಿ.ಮೀ. ಮಳೆಯಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಉಡುಪಿ, ಚಿಕ್ಕಮಗಳೂರು, ತುಮಕೂರು, ಮೈಸೂರು, ರಾಮನಗರ, ಶಿವಮೊಗ್ಗ ಸೇರಿದಂತೆ ೧೭ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.