ರಾಜಧಾನಿ ಬೆಂಗಳೂರು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ 5 ದಿನ ಮಳೆ

ಬುಧವಾರ, 1 ಜೂನ್ 2022 (20:05 IST)
ರಾಜಧಾನಿ ಬೆಂಗಳೂರು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ 5 ದಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂಗಾರು ನೈರುತ್ಯ ಭಾಗದಿಂದ ಪ್ರವೇಶ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರಿಂದಾಗಿ ರಾಜಧಾನಿಯಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು ಮಿಂಚು, ಗಾಳಿ ಸಹಿತ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.
ಇಂದು ಮತ್ತೆ ನಾಳೆ ಸಾಧಾರಣ ಮಳೆ ಇದ್ದು, ಕೊನೆಯ ಮೂರು ದಿನಗಳ ಭಾರೀ ಮಳೆ ಸಂಭವ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಹವಾಮಾನ ತಜ್ಞ ಪ್ರಸಾದ್ ರಿಂದ ಮಾಹಿತಿ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ