ಇದೇ ವರ್ಷ ತಲೆ ಎತ್ತಲಿವೆ 5 ಫ್ಲೈಓವರ್ಗಳು!

ಮಂಗಳವಾರ, 28 ಮಾರ್ಚ್ 2023 (09:26 IST)
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ. ಸಂಚಾರ ದಟ್ಟಣೆ ಹೆಚ್ಚಾಗಿದೆ. ಸಮಸ್ಯೆ ನಿವಾರಣೆಗೆ ಅಂತಾ ಬಿಬಿಎಂಪಿ ಫ್ಲೈಓವರ್ ಗಳನ್ನ ನಿರ್ಮಾಣ ಮಾಡಿದೆ. ಈಗ ಮತ್ತೆ ಹೊಸದಾಗಿ ನಗರದಲ್ಲಿ ನಾಲ್ಕೈದು ಫ್ಲೈಓವರ್ ನಿರ್ಮಾಣಕ್ಕೆ ಪ್ಲಾನ್ ಮಾಡಿದೆ.
 
ಬೆಂಗಳೂರಿನಂತಹ ಮಹಾನಗರದಲ್ಲಿ ಸಂಚಾರ ದಟ್ಟಣೆ ದಟ್ಟವಾಗಿದೆ. ಪ್ರಪಂಚದಲ್ಲೆ ಸಂಚಾರ ದಟ್ಟಣೆ ವಿಚಾರದಲ್ಲಿ ಬೆಂಗಳೂರಿಗೆ ಎರಡನೇ ಸ್ಥಾನ ಇದೆ. ಈ ಕುಖ್ಯಾತಿಯಿಂದ ಹೊರಬರಲು ಸರ್ಕಾರ ಮತ್ತು ಬಿಬಿಎಂಪಿ ಹರಸಾಹಸ ಪಡ್ತಿದೆ.

ನಗರದಲ್ಲಿ ರಸ್ತೆಗಳ ಅಭಿವೃದ್ಧಿ ಮತ್ತು ವಿಸ್ತರಣೆ ಮಾಡಿ ಸಂಚಾರ ದಟ್ಟಣೆ ನಿಯಂತ್ರಣ ಮಾಡ್ತಾ ಇದ್ದಾರೆ. ಬಿಬಿಎಂಪಿ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಶತ ಪ್ರಯತ್ನ ಮಾಡ್ತಾ ಇದೆ. ಆ ನಿಟ್ಟಿನಲ್ಲಿ ಈ ಬಾರಿಯ ಬಜೆಟ್ನಲ್ಲಿ ಬಿಬಿಎಂಪಿ ಈ ವರ್ಷ ಹೊಸ ಐದು ಫ್ಲೈಓವರ್ಗಳ ನಿರ್ಮಾಣಕ್ಕೆ ಮುಂದಾಗಿದೆ. ಇದಕ್ಕೆ ಅಂತಾನೇ 200ಕ್ಕೂ ಹೆಚ್ಚು ಕೋಟಿ ಮೀಸಲಿಟ್ಟಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ