2 ವರ್ಷದಲ್ಲಿ 5 ಲಕ್ಷ ಮನೆ ನಿರ್ಮಾಣಕ್ಕೆ ರಾಜ್ಯ ಸಂಪುಟ ಅಸ್ತು
ಮುಂದಿನ ಎರಡು ವರ್ಷದಲ್ಲಿ 5 ಲಕ್ಷ ಮನೆಗಳನ್ನು ನಿರ್ಮಿಸುವ ಮಹತ್ವದ ಯೋಜನೆಗೆ ರಾಜ್ಯ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಬದಲಾವಣೆ ಬಿಸಿಬಿಸಿ ಚರ್ಚೆಯ ನಡುವೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ 8 ಸಾವಿರ ಕೋಟಿ ರೂ. ವೆಚ್ಚದಲ್ಲಿ ಗ್ರಾಮೀಣ ಪ್ರದೇಶದಲ್ಲಿ 4 ಲಕ್ಷ
ಹಾಗೂ ನಗರ ಪ್ರದೇಶದಲ್ಲಿ 1 ಲಕ್ಷ ಮನೆಗಳನ್ನು ನಿರ್ಮಿಸುವ ಯೋಜನೆಗೆ ಸಮ್ಮತಿಸಲಾಯಿತು.
ಬೆಂಗಳೂರಿನಲ್ಲಿ ಬಹುಮಹಡಿ ಕಟ್ಟಡ ನಿರ್ಮಿಸುವ ಹಾಗೂ ಮೂಲಭೂತ ಯೋಜನೆಗೆ 500 ಕೋಟಿ ರೂ. ಬಿಡುಗಡೆ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.