50 ಲಕ್ಷ ಮೌಲ್ಯದ 4 ಟನ್ ರಕ್ತಚಂದನ ಮರದ ತುಂಡು ವಶ

ಮಂಗಳವಾರ, 24 ಮೇ 2016 (19:33 IST)
ಬಾವಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 50 ಲಕ್ಷ ರೂಪಾಯಿ ಮೌಲ್ಯದ 4 ಟನ್ ರಕ್ತಚಂದನ ಮರದ ತುಂಡುಗಳನ್ನು ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
 
ಹೊಸಕೋಟೆ ತಾಲೂಕಿನ ಕಟ್ಟಿಗೇನಹಳ್ಳಿಯಲ್ಲಿ ಉಬೇದುಲ್ಲಾ ಖಾನ್ ಅವರಿಗೆ ಸೇರಿದ ತೋಟದ ಮನೆಯ ಬಾವಿಯಲ್ಲಿ ಅಕ್ರಮವಾಗಿ ಅಡಗಿಸಿಟ್ಟಿದ್ದ 50 ಲಕ್ಷ ರೂಪಾಯಿ ಮೌಲ್ಯದ ರಕ್ತಚಂದನ ಮರದ ತುಂಡುಗಳನ್ನು ಆಂಧ್ರಪ್ರದೇಶ ಪೊಲೀಸರು ನೀಡಿದ ಖಚಿತ ಮಾಹಿತಿ ಮೇಲೆ ಸ್ಥಳೀಯ ಪೊಲೀಸರು ದಾಳಿ ನಡೆಸಿ 4 ಟನ್‍ ರಕ್ತಚಂದನ ಮರದ ತುಂಡುಗಳು ವಶಪಡಿಸಿಕೊಂಡಿದ್ದಾರೆ. 
 
20 ದಿನಗಳ ಹಿಂದೆ ಆಂಧ್ರಪ್ರದೇಶದ ಶೇಷಾಚಲಂನಿಂದ ಅಕ್ರಮವಾಗಿ ರಕ್ತಚಂದನ ಮರದ ತುಂಡುಗಳನ್ನು ತಂದು ಅಡಗಿಸಿಟ್ಟಿದ್ದರು ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಿಯಾಜ್‌ನನ್ನು ವಶಕ್ಕೆ ಪಡೆದ ಪೊಲೀಸರು ಉಳಿದ ಆರೋಪಿಗಳಿಗಾಗಿ ಶೋಧಕಾರ್ಯ ನಡೆಸಿದ್ದಾರೆ.
 
ಈ ಸಂಬಂಧ ತಿರುಮಲಶೆಟ್ಟಿಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

 
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ