ಬಾಲಕಿಯರಿಗಾಗಿ 50 ಪಿಂಕ್ ಶೌಚಾಲಯ
ಬಾಲಕಿಯರಿಗಾಗಿ 50 ಪಿಂಕ್ ಶೌಚಾಲಯ ನಿರ್ಮಾಣಕ್ಕೆ ಜಿಪಂ ಅಧ್ಯಕ್ಷ ಆದೇಶ ನೀಡಿದ್ದಾರೆ.
ಗದಗ ಜಿಲ್ಲೆಯ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಕೊರತೆ ಇರುವ ಶೌಚಾಲಯಗಳ ಕುರಿತು ಮಾಹಿತಿ ಪಡೆದು, ಆಯ್ದ ಶಾಲೆಗಳನ್ನು ಗುರುತಿಸಲಾಗಿದೆ.
ಪಿಂಕ್ ಶೌಚಾಲಯ ನಿರ್ಮಾಣಕ್ಕೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ, ಸ್ವಚ್ಛ ಭಾರತ ಹಾಗೂ ಜಿಲ್ಲಾ ಪಂಚಾಯತ್ ಅಭಿವೃದ್ಧಿ ಅನುದಾನದಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದೆ. ಮುಂದಿನ ಹಂತದಲ್ಲಿ ಇನ್ನೂ ಹೆಚ್ಚಿನ ಪಿಂಕ್ ಶೌಚಾಲಯಗಳ ನಿರ್ಮಾಣ ಮಾಡಲಾಗುವುದು ಎಂದಿದ್ದಾರೆ.