ಮೊದಲ ಹಂತದಲ್ಲೇ ರಾಜ್ಯದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ: ಮಧು ಬಂಗಾರಪ್ಪ

Sampriya

ಮಂಗಳವಾರ, 8 ಜುಲೈ 2025 (20:16 IST)
Photo Credit X
ಬೆಳಗಾವಿ: ಗ್ರಾಮ ಮಟ್ಟದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ದೃಷ್ಟಿಕೋನದಿಂದ ರಾಜ್ಯದಲ್ಲಿ ಮೊದಲ ಹಂತದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಇದಕ್ಕೆ ₹2,500 ಕೋಟಿ ಅನುದಾನ ಅಗತ್ಯ. ಈ ಸಂಬಂಧ ಎಡಿಬಿ ಬ್ಯಾಂಕ್ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲ ಶಾಸಕರಿಗೂ ತಲಾ 2 ಅಥವಾ 3 ಶಾಲೆಗಳನ್ನು ನೀಡಲಾಗುವುದು’ ಎಂದರು.

‘ಮೂರು ವರ್ಷಗಳಲ್ಲಿ 13,500 ಪ್ರಾಥಮಿಕ ಶಾಲೆ ಶಿಕ್ಷಕರ ನೇಮಕಾತಿ ಆಗಿದೆ. ಶೀಘ್ರದಲ್ಲೇ 20 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು.

‘ಚುನಾವಣೆಯೂ ಸೇರಿದಂತೆ ಬೇರೆ ಯಾವುದೇ ಚಟುವಟಿಕೆಗೆ ಸರ್ಕಾರಿ ಶಾಲೆ ಶಿಕ್ಷಕರನ್ನು ನಿಯೋಜನೆ ಮಾಡಬಾರದು ಎಂಬ ನಿರ್ಧಾರವನ್ನು ತೆಗೆದುಕೊಂಡಿದ್ದು, ಸಿಎಂ ಅವರಿಗೆ ಈ ವಿಚಾರವನ್ನು ಮನವರಿಕೆ ಮಾಡಿದ್ದೇನೆ. ಶಿಕ್ಷಕರು ಶಾಲೆಯಲ್ಲೇ ಹೆಚ್ಚು ಚಟುವಟಿಕೆ ಆರಂಭಿಸಲು ಅನುಕೂಲ ಮಾಡಿಕೊಡಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ