ಬೆಂಗಳೂರು ವಿಮಾನ ನಿಲ್ದಾಣದಲ್ಲಿ 6.29 ಕೋಟಿ ಮೌಲ್ಯದ ಚಿನ್ನ ಕಳ್ಳಸಾಗಣೆ

sampriya

ಶುಕ್ರವಾರ, 7 ಜೂನ್ 2024 (11:37 IST)
Photo By X
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನವನ್ನು ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದಾಗ ₹6.29 ಕೋಟಿ ಮೌಲ್ಯದ 9 ಕೆ.ಜಿಗೂ ಅಧಿಕ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ವಶಪಡಿಸಿಕೊಂಡಿದೆ.

ಡಿಆರ್‌ಐ ಅಧಿಕಾರಿಗಳ ಪ್ರಕಾರ ಮಂಗಳವಾರ ಬೆಳಿಗ್ಗೆ ನಡೆಸಿದ್ದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ವಶಪಡಿಸಿಕೊಳ್ಳಲಾಗಿದೆ.

ಮೊದಲ ಪ್ರಕರಣದಲ್ಲಿ ಬೆಂಗಳೂರಿಗೆ ಬ್ಯಾಂಕಾಕ್‌ನಿಂದ ಬಂದಿದ್ದ ವಿಮಾನದಲ್ಲಿ ಹ್ಯಾಂಡ್‌ಬ್ಯಾಗ್‌ನಲ್ಲಿದ್ದ ಗಟ್ಟಿ ಹಾಗೂ ಕಚ್ಚಾ ರೂಪದಲ್ಲಿ 6.8 ಕೆ.ಜಿ ಚಿನ್ನ ಪತ್ತೆಯಾಗಿದೆ. ಇನ್ನೂ ಪ್ರಕರಣ ಸಂಬಂಧ ಹ್ಯಾಂಡ್‌ಬ್ಯಾಗ್‌ನಲ್ಲಿ ದೊರೆತ ದಾಖಲೆಯ ಆಧಾರದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. 

ಇದಾದ ಕೆಲವೇ  ಗಂಟೆಯೊಳಗೆ  ನಡೆದ ಮತ್ತೊಂದು ಪ್ರಕರಣದಲ್ಲಿ ದುಬೈಯಿಂದ ಬಂದಿಳಿದಿದ್ದ ಎಮಿರೇಟ್ಸ್ ವಿಮಾನದಲ್ಲಿ ತಪಾಸಣೆ ನಡೆಸಿದಾಗ ಗಟ್ಟಿ ರೂಪದಲ್ಲಿ 2.18 ಕೆ.ಜಿ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಚಿನ್ನದ ಮೌಲ್ಯ ₹1.52 ಕೋಟಿ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ