ಮೈತೇಯಿ ವಿದ್ಯಾರ್ಥಿಗಳ ಹತ್ಯೆಗೈದ 6 ಬಂಡುಕೋರರ ಬಂಧನ
ಮಣಿಪುರ ಹಿಂಸಾಚಾರದಲ್ಲಿ ನಾಪತ್ತೆಯಾಗಿದ್ದ ಮೈತೇಯಿ ಸಮುದಾಯದ ಇಬ್ಬರು ವಿದ್ಯಾರ್ಥಿಗಳ ಮೃತದೇಹದ ಫೋಟೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಭಾರಿ ಹಿಂಸಾಚಾರ ಭುಗಿಲೆದ್ದಿತ್ತು. ಇತ್ತ ಕ್ಷಿಪ್ರ ಕಾರ್ಯಾಚರಣೆಗೆ ಇಳಿದ CBI ಈ ಪ್ರಕರಣ ಸಂಬಂಧ 6 ಮಂದಿಯನ್ನು ಬಂಧಿಸಿದೆ. ಈ ಪೈಕಿ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಅಪ್ರಾಪ್ತ ಬಾಲಕಿಯರು ಸೇರಿದ್ದಾರೆ.