7 ದಿನ ಕ್ವಾರಂಟೈನ್ ಪೂರ್ಣಗೊಳಿಸಿದ್ರೆ ಡಿಸ್ಚಾರ್ಜ್

ಶನಿವಾರ, 23 ಮೇ 2020 (19:09 IST)
ಏಳು ದಿನಗಳ ಸಾಂಸ್ಥಿಕ ಕ್ವಾರಂಟೈನ್ ಪೂರ್ಣಗೊಳಿಸಿದವರನ್ನು ಡಿಸ್ಚಾರ್ಜ್ ಮಾಡಲಾಗುತ್ತಿದೆ.

ಸರ್ಕಾರದ ಪರಿಷ್ಕೃತ ಮಾರ್ಗಸೂಚಿಗಳ ಪ್ರಕಾರ ಅತಿಹೆಚ್ಚು ಪ್ರಕರಣಗಳಿರುವ ರಾಜ್ಯಗಳಿಂದ ಆಗಮಿಸುವ ಜನರನ್ನು ಏಳು ದಿನಗಳ ಸಾಂಸ್ಥಿಕ ಕ್ವಾರಂಟೈನ್ ಹಾಗೂ ನಂತರ ಏಳು ದಿನಗಳ ಹೋಂ ಕ್ವಾರಂಟೈನ್ ನಲ್ಲಿರಿಸಲಾಗುವುದು. ಇತರ ರಾಜ್ಯಗಳಿಂದ ಬರುವ ಜನರನ್ನು ನೇರವಾಗಿ ಹೋಂ ಕ್ವಾರಂಟೈನ್ ನಲ್ಲಿ ಇರಿಸಲಾಗುವುದು.

ಧಾರವಾಡ ಜಿಲ್ಲೆಯ ಸಾಂಸ್ಥಿಕ ಹಾಗೂ ಹೋಟೆಲ್ ಕ್ವಾರಂಟೈನ್ ನಲ್ಲಿ ಏಳುದಿನಗಳ ಅವಧಿ ಪೂರ್ಣಗೊಳಿಸಿರುವ ವ್ಯಕ್ತಿಗಳನ್ನು ಮತ್ತೊಂದು ಬಾರಿ ಕೋವಿಡ್ ತಪಾಸಣೆಗೊಳಪಡಿಸಿ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಸೂಚಿಸಿದ್ದಾರೆ.

ಸರ್ಕಾರದ ಪರಿಷ್ಕೃತ ಮಾರ್ಗಸೂಚಿಗಳ ಪ್ರಕಾರ ಸಾಂಸ್ಥಿಕ ಕ್ವಾರಂಟೈನ್ ಅವಧಿಯಲ್ಲಿ ಇಳಿಕೆಯಾಗಿದೆ. ಗರ್ಭಿಣಿಯರು, 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಸೇರಿದಂತೆ, ವೈದ್ಯಕೀಯ ವೃತ್ತಿಪರರು, ರಕ್ಷಣಾ ಪಡೆಗಳ ಸಿಬ್ಬಂದಿಗೆ ಸಾಂಸ್ಥಿಕ ಕ್ವಾರಂಟೈನ್ ನಿಂದ ವಿನಾಯಿತಿ ನೀಡಲಾಗಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ