24 ಗಂಟೆಗಳಲ್ಲಿ ದೇಶದಲ್ಲಿ 752 ಕೊರೋನಾ ಕೇಸ್
ಕೋವಿಡ್ 19 ಸೋಂಕಿಗೆ ಸಂಬಂಧಿಸಿದಂತೆ ಶನಿವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ 752 ಹೊಸ ಪ್ರಕರಣಗಳು ದೇಶದಲ್ಲಿ ದಾಖಲಾಗಿವೆ. ಕಳೆದ ಮೇ 21ರಿಂದ ಇಲ್ಲಿಯವರೆಗೆ ಒಂದು ದಿನದಲ್ಲಿ ದಾಖಲಾದ ಗರಿಷ್ಠ ಸಂಖ್ಯೆ ಇದಾಗಿದೆ.
ಇದರಿಂದಾಗಿ ದೇಶದಲ್ಲಿ ಒಟ್ಟು ಸಕ್ರಿಯ ಸೋಂಕಿತರ ಪ್ರಮಾಣ 3,420 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. ಸೋಂಕಿಗೆ ನಾಲ್ವರು ಬಲಿಯಾಗಿದ್ದಾರೆ. ಇವರಲ್ಲಿ ಕೇರಳದಲ್ಲಿ ಇಬ್ಬರು, ರಾಜಸ್ಥಾನ ಹಾಗೂ ಕರ್ನಾಟಕದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.