ನಗರ ಸಭೆ ಚುನಾವಣೆಯ ತಮ್ಮ ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲ ನೀಡದೆ ತಮಗೆ ಅನುಕೂಲವಾಗುವ ಅಭ್ಯರ್ಥಿಗಳನ್ನು ಪಕ್ಷೇತರಾಗಿ ನಿಲ್ಲಿಸಿ, ಗೆಲುವು ಸಾಧಿಸಿ ತೋರಿಸಿದ್ದಾರೆ. ಇನ್ನು 13 ಮಂದಿ ಪಕ್ಷೇತರ ಅಭ್ಯರ್ಥಿಗಳನ್ನು ಗೆಲಿಸುವುದರ ಮೂಲಕ ರಾಜ್ಯ ಹಾಗೂ ಕೇಂದ್ರ ನಾಯಕರಿಗೆ ಸಂದೇಶ ರವಾನಿಸಿದ್ದಾರೆ
ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ಈ ರೆಸಾರ್ಟ್ ನಲ್ಲಿ ತಡರಾತ್ರಿ ಡಿಜೆ ಹಾಕಿ ಮದ್ಯದ ಪಾರ್ಟಿ ಮಾಡುತ್ತಿದ್ದರು. ಈ ಮಾಹಿತಿ ಆಧರಿಸಿ ಚಿಕ್ಕಬಳ್ಳಾಪುರ ಸಿಪಿಐ ಪ್ರಶಾಂತ್ ಹಾಗೂ ಮೂವರು ಸಿಬ್ಬಂದಿ ಭೇಟಿ ನೀಡಿದ್ದರು. ಆದರೆ ಗೇಟ್ ಗೆ ಬೀಗ ಹಾಕಿದ್ದ ರೆಸಾರ್ಟ್ ಮಾಲೀಕರು ಸಾಕಷ್ಟು ಸಮಯ ಬೀಗ ತೆಗೆದಿಲ್ಲ. ನಂತರ ಗೇಟ್ ಬೀಗ ತೆಗೆದಾಗ ಕೆಲ ಪಾನಮತ್ತ ಯುವಕರು ಹೊರ ಬಂದು ಪೊಲೀಸರ ಜೊತೆ ವಾಗ್ವಾದಕ್ಕಿಳಿದಿದ್ದಾರೆ. ಮಾತಿಗೆ ಮಾತು ಬೆಳೆದು ಗೇಟ್ ಬಳಿಯೇ ಪೊಲೀಸರು ಹಾಗೂ ಯುವಕರ ನಡುವೆ ತಳ್ಳಾಟ, ನೂಕಾಟ ಆಗಿದೆ.
ಪೊಲೀಸರ ಮೇಲೆಯೇ ಪಾನಮತ್ತ ಯುವಕರ ಹಲ್ಲೆ ನಡೆಸಿದ್ದಾರೆ. ಇದನ್ನು ಪ್ರಶ್ನೆ ಮಾಡಿದ ಚಿಕ್ಕಬಳ್ಳಾಪುರ ಇನ್ಸ್ಪೆಕ್ಟರ್ ಅವರೊಂದಿಗೆ ಗಲಾಟೆ ಮಾಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ. ಎಸ್ಪಿ ಹಾಗೂ ಡಿವೈಎಸ್ಪಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ನಂತರ ಪಾನಮತ್ತ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಿಕ್ಕಬಳ್ಳಾಪುರ ತಾಲೂಕು ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.