83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭ

ಗುರುವಾರ, 23 ನವೆಂಬರ್ 2017 (09:17 IST)
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನ.24ರಿಂದ 26ರವರೆಗೆ ನಡೆಯಲಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಹುತೇಕ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ನವವಧುವಿನಂತೆ ಮೈಸೂರು ನಗರ ಕಂಗೊಳಿಸುತ್ತಿದೆ.

ಇಲ್ಲಿನ ಮಹಾರಾಜ ಕಾಲೇಜಿನ ಆವರಣದಲ್ಲಿ ಮೈಸೂರು ಅರಮನೆಯ ದರ್ಬಾರ್ ಹಾಲ್ ನಂತೆ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಪ್ರಮುಖ ರಸ್ತೆಗಳುದ್ದಕ್ಕೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಹಾಗೂ ಸಾಹಿತಿಗಳ ಕಟೌಟ್ ಗಳನ್ನು ಅಳವಡಿಸಲಾಗಿದೆ.

ಎಲ್ಇಡಿ ಬಲ್ಬಗಳನ್ನು ಅಳವಡಿಸಲಾಗಿದ್ದರಿಂದ ರಾತ್ರಿಯಲ್ಲೂ ಮೈಸೂರು ಬೆಳಕಿನಿಂದ ಕಂಗೊಳಿಸುತ್ತಿದೆ. ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಅಳವಡಿಸಿರುವ ಕನ್ನಡದ ಬಾವುಟಗಳು  ಸಮ್ಮೇಳನಕ್ಕೆ ಸ್ವಾಗತ ಮಾಡುತ್ತಿವೆ.

ಮಹಾರಾಜ ಕಾಲೇಜಿನ ಮೈದಾನದಲ್ಲಿ ಜರ್ಮನ್ ತಂತ್ರಜ್ಞಾನದಲ್ಲಿ ವಿಶಾಲವಾದ ಪೆಂಡಾಲ್ ನಲ್ಲಿ ಸಮ್ಮೇಳನ ನಡೆಯಲಿದ್ದು, ಅಂದಾಜು 25 ಸಾವಿರ ಜನರು ಕುಳಿತುಕೊಳ್ಳಲು ಅನುಕೂಲವಾಗುವಂತೆ ಪೆಂಡಾಲ್ ನಿರ್ಮಿಸಲಾಗಿದೆ. ಸಮ್ಮೇಳನ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲರನ್ನು ಮೆರವಣಿಗೆ ಮೂಲಕ ಸಾರೋಟಿನಲ್ಲಿ ಕರೆತರಲಾಗುತ್ತದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಮ್ಮೇಳನವನ್ನು ಶುಕ್ರವಾರ ಉದ್ಘಾಟಿಸಲಿದ್ದು, ಅನೇಕ ಗಣ್ಯರು ಹಾಗೂ ಸಾಹಿತಿಗಳು ಸಮ್ಮೇಳನಕ್ಕೆ ಮೆರಗು ನೀಡಲಿದ್ದಾರೆ. ಮೈಸೂರಿನಲ್ಲಿ ನಡೆಯುವ ಅಕ್ಷರ ಜಾತ್ರೆ ಇತಿಹಾಸ ಪುಟ ಸೇರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ