ತುಮಕೂರು ವಿಶ್ವವಿದ್ಯಾಲಯ: ಜನವರಿ 24ರಂದು 8ನೇ ಘಟಿಕೋತ್ಸವ

ಶನಿವಾರ, 24 ಜನವರಿ 2015 (16:52 IST)
ರಾಷ್ಟ್ರದ ಮೂವರು ಗಣ್ಯರಿಗೆ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲು ವಿಶ್ವವಿದ್ಯಾಲಯ ನಿರ್ಧರಿಸಿದ್ದು, ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಅಧ್ಯಕ್ಷ ಡಾ.ಎ.ಎಸ್.ಕಿರಣ್ ಕುಮಾರ್, ಜಿಯಾಲಜಿಕಲ್ ಸರ್ವೇ ಆಫ್ ಇಂಡಿಯಾದ ಮಾಜಿ ಹಿರಿಯ ವಿಜ್ಞಾನಿ ಟಿ.ಆರ್.ಅನಂತರಾಂ ಹಾಗೂ ಕನ್ನಡ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರಿಗೆ ನಗರದಲ್ಲಿ ಜನವರಿ 24ರಂದು ನಡೆಯಲಿರುವ 8ನೇ ಘಟಿಕೋತ್ಸವದಲ್ಲಿ ಪ್ರದಾನ ಮಾಡಲಾಗುವುದು ಎಂದು ತುಮುಕೂರು ವಿಶ್ವವಿದ್ಯಾಲಯದ ಕುಲಪತಿ ಎ.ಹೆಚ್.ರಾಜಾಸಾಬ್ ತಿಳಿಸಿದ್ದಾರೆ. 
 
ನಗರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರಾದ ವಜುಭಾಯಿ ವಾಲಾ ಅವರು ಘಟಿಕೋತ್ಸವದ ಮುಖ್ಯಸ್ಥರಾಗಿದ್ದು, ಘಟಿಕೋತ್ಸವವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ವಿಶ್ವವಿದ್ಯಾಲಯದ ಧನ ಆಯೋಗದ ಉಪಾಧ್ಯಕ್ಷ ಪ್ರೊ.ಹೆಚ್.ದೇವರಾಜ್ ಅವರು ಮುಖ್ಯ ಅತಿಥಿಗಳಾಗಿದ್ದು, ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಿದ್ದಾರೆ. ಇನ್ನು ಸಮಾರಂಭದಲ್ಲಿ ರಾಜ್ಯದ ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಸೇರಿದಂತೆ ಇತರೆ ಗಣ್ಯರು ಭಾಗವಹಿಸಲಿದ್ದಾರೆ ಎಂದರು. 
 
ಈ ಘಟಿಕೋತ್ಸವದಲ್ಲಿ ಒಂದು ಡಿ.ಲಿಟ್, ಒಂದು ಪಿಹೆಚ್‌ಡಿ, 1208 ಸ್ನಾತಕೋತ್ತರ ಹಾಗೂ 7297 ಪದವಿ ಪ್ರದಾನ ಮಾಡಲಿದ್ದು, ಈ ಎಲ್ಲಾ ವಿದ್ಯಾರ್ಥಿಗಳೂ ಕೂಡ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಘಟಿಕೋತ್ಸವದಲ್ಲಿ ವಿಶ್ವವಿದ್ಯಾಲಯವು ಒಟ್ಟು 73 ಬಂಗಾರದ ಪದಕಗಳನ್ನು ಪ್ರದಾನ ಮಾಡುತ್ತಿದ್ದು,  56 ಪದಕಗಳನ್ನು ದಾನಿಗಳು ದಾನ ನೀಡಿದ್ದಾರೆ. ಇದರ ಜೊತೆಗೆ ನಾಲ್ಕು ನಗದು ಬಹುಮಾನಗಳನ್ನೂ ವಿತರಿಸಲಾಗುವುದು ಎಂದರು. 

ವೆಬ್ದುನಿಯಾವನ್ನು ಓದಿ