ಬೆಂಗಳೂರು : ಜಿಎಸ್ಟಿ ಕಟ್ಟಬೇಕೆಂದು ಹೇಳಿ ಖಾಸಗಿ ಕಂಪನಿಗೆ ಬರೋಬ್ಬರಿ 9.60 ಕೋಟಿ ರೂ. ವಂಚಿಸಿರುವಂತಹ ಘಟನೆ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಈ ಸಂಬಂಧ ಸಂಜಯ್ ನಗರ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ನಿಖಿಲ್ ಹಾಗೂ ವಿನಯ್ ಬಾಬು ಬಂಧಿತ ಆರೋಪಿಗಳು. ಕೊರಿಯಾ ಮೂಲದ ಟರ್ಮಿನಸ್ ಡೆಚಾಂಗ್ ಸೀಟ್ ಎಂಬ ಆಟೋಮೋಟಿವ್ ಖಾಸಗಿ ಕಂಪನಿಗೆ ಇಬ್ಬರು ಅಸೋಸಿಯೇಟ್ ಚಾರ್ಟರ್ಡ್ ಅಕೌಂಟೆಂಟ್ ಆಗಿ ಸೇರಿಕೊಂಡಿದ್ದರು.
ಕೆಲಸಕ್ಕೆ ಸೇರಿಕೊಂಡವರು ಜಿಎಸ್ಟಿ ಕಟ್ಟಬೇಕು ಎಂದು ಕಂಪನಿ ಮಾಲೀಕರ ಬಳಿ ಸುಮಾರು 9.60 ಕೋಟಿ ಹಣವನ್ನು ಹಂತ ಹಂತವಾಗಿ ಪಡೆದಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಸಂಜಯ್ ನಗರ ಪೊಲೀಸರು ನಿಖಿಲ್, ವಿನಯ್ ಬಾಬುವನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಮತ್ತಿಬ್ಬರು ತಲೆ ಮರೆಸಿಕೊಂಡಿದ್ದು ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಅಷ್ಥೇ ಅಲ್ಲದೇ ಆರೋಪಿಗಳಿಗೆ ಸಂಬಂಧಿಸಿದ 3 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ.