24 ಗಂಟೆಗಳಲ್ಲಿ 9 ನವಜಾತ ಶಿಶುಗಳು ಸಾವು..!
ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನಲ್ಲಿರುವ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕಳೆದ 24 ಗಮಟೆಗಳಲ್ಲಿ 9 ನವಜಾತ ಶಿಶುಗಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಇದಾದ ನಂತರ ಬಂಗಾಳದಲ್ಲಿ ಕೋಲಾಹಲ ಉಂಟಾಗಿದೆ. ಮುರ್ಷಿದಾಬಾದ್ ವೈದ್ಯಕೀಯ ಕಾಲೇಜಿನ SNCU ವಾರ್ಡ್‌ನಲ್ಲಿ ನಡೆದ ಈ ಘಟನೆಯ ಕುರಿತು ವೈದ್ಯಕೀಯ ಕಾಲೇಜು ಅಧಿಕಾರಿಗಳು ಇದೀಗ ತನಿಖಾ ಸಮಿತಿಯನ್ನು ರಚಿಸಿದ್ದಾರೆ.