ಭೀಕರ ರಸ್ತೆ ಅಪಘಾತಕ್ಕೆ 9 ಮಂದಿ ಬಲಿ!

ಗುರುವಾರ, 25 ಆಗಸ್ಟ್ 2022 (10:34 IST)
ತುಮಕೂರು : ಭೀಕರ ಅಪಘಾತಕ್ಕೆ 9 ಮಂದಿ ಬಲಿಯಾಗಿರುವ ಘಟನೆ ಶಿರಾ ತಾಲೂಕಿನ ಕಳ್ಳಂಬೆಳ್ಳದಲ್ಲಿ ನಡೆದಿದೆ.
 
ಮುಂಜಾನೆ ನಿಂತಿದ್ದ ಲಾರಿಗೆ ಗುದ್ದಿದ ಕ್ರೂಸರ್ ಗುದ್ದಿದ ಪರಿಣಾಮ 9 ಮಂದಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ವಾಹನದಲ್ಲಿ 20ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಮೃತಪಟ್ಟವರು ರಾಯಚೂರು ಮೂಲದ ಕಾರ್ಮಿಕರು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ