ರಾಜ್ಯದಲ್ಲಿ ಕುಸಿದ ಕೊರೊನಾ: 973 ಪಾಸಿಟಿವ್ ಪತ್ತೆ, 17 ಮಂದಿ ಸಾವು
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 973 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 17 ಮಂದಿ ಅಸುನೀಗಿದ್ದಾರೆ. ಈ ಮೂಲಕ ಹಿಂದಿನ ದಿನಕ್ಕೆ ಹೋಲಿಸಿದರೆ ಸೋಂಕು ಪ್ರಮಾಣದಲ್ಲಿ ಕುಸಿತ ಕಂಡು ಬಂದಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 243 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 8 ಮಂದಿ ಮೃತಪಟ್ಟಿದ್ದಾರೆ.