ಪ್ರೀತ್ಸೆ, ಪ್ರೀತ್ಸೆ ಎಂದು 9ನೇ ವಿದ್ಯಾರ್ಥಿನಿಗೆ 5 ತಿಂಗಳ ಗರ್ಭಿಣಿಯಾಗಿಸಿದ ಕಾಮುಕ
ಭಾನುವಾರ, 27 ಆಗಸ್ಟ್ 2017 (13:45 IST)
ಪ್ರೀತ್ಸೆ, ಪ್ರೀತ್ಸೆ ಎಂದು 9ನೇ ವಿದ್ಯಾರ್ಥಿನಿಗೆ 5 ತಿಂಗಳ ಗರ್ಭಿಣಿಯಾಗಿಸಿದ ಕಾಮುಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜಿಲ್ಲೆಯ ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಯುವಕನೊಬ್ಬ ಪ್ರೀತಿಯ ನೆಪದಲ್ಲಿ ವಿದ್ಯಾರ್ಥಿನಿಗೆ ನಿರಂತರವಾಗಿ ಅತ್ಯಾಚಾರವೆಸಗಿದ ಹಿನ್ನೆಲೆಯಲ್ಲಿ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿದ್ದಾಳೆ. ಬಾಲಕಿಗೆ ಗರ್ಭಿಣಿಯಾಗಿರುವುದು ನಂಚರ ಬಹಿರಂಗವಾಗಿದೆ.
ಗ್ರಾಮಸ್ಥರು ಮಕ್ಕಳ ಸಹಾಯವಾಣಿಗೆ ಕರೆ ಮಾಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸಿ ವಿಚಾರಣೆ ನಡೆಸಿದಾಗ ಆರೋಪಿ ಯುವಕನ ಕುರಿತು ಮಾಹಿತಿ ನೀಡಿದ್ದಾಳೆ.
ಆರೋಪಿ ಯುವಕನ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.