10 ವರ್ಷದ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ಅಪ್ರಾಪ್ತ

ಭಾನುವಾರ, 3 ಮಾರ್ಚ್ 2019 (07:26 IST)
ಮುಂಬೈ : 12 ವರ್ಷದ ಅಪ್ರಾಪ್ತ ಬಾಲಕನೊಬ್ಬ 10 ವರ್ಷದ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿ, ಆಕೆಯನ್ನು ಗರ್ಭಿಣಿ ಮಾಡಿದ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.


ಸಂತ್ರಸ್ತ ಬಾಲಕಿ ಹಾಗೂ ಆರೋಪಿ ಬಾಲಕ ಇಬ್ಬರೂ ಅಕ್ಕಪಕ್ಕದ ಮನೆಯವರಾಗಿದ್ದು, ಬಾಲಕ ಕಳೆದ ನಾಲ್ಕು ತಿಂಗಳಿನಿಂದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಕೆಲ ದಿನಗಳ ಹಿಂದೆ ಬಾಲಕಿಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಕೆಯ ಪೋಷಕರು ವೈದ್ಯರ ಬಳಿ ಕರೆದುಕೊಂಡು ಹೋದಾಗ ಬಾಲಕಿ ಗರ್ಭಿಣಿಯಾಗಿರುವ ವಿಚಾರ ತಿಳಿದುಬಂದಿದೆ. ಆಗ ಪೋಷಕರು ಈ ಬಗ್ಗೆ ಬಾಲಕಿಯ ಬಳಿ ಕೇಳಿದಾಗ ಬಾಲಕಿ ನಡೆದ ಘಟನೆಯನ್ನು ವಿವರಿಸಿದ್ದಾಳೆ.


ಈ ಸಂಬಂಧ ಸಂತ್ರಸ್ತ ಬಾಲಕಿಯ ಪೋಷಕರು ಬಾಲಕನ ವಿರುದ್ಧ ಮೋಖದಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಹಾಗೂ ಪೊಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ. 
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ