ಕೊರೊನಾ ವಿರುದ್ಧ ಹೋರಾಡಿ ಗೆದ್ದ 23 ವರ್ಷದ ಯುವತಿ
ಕೊರೋನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಚೇತರಿಸಿಕೊಂಡಿದ್ದು, ಇದೀಗ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾಳೆ.
ಇದರಿಂದ ಕಲಬುರಗಿ ಜಿಲ್ಲೆಯಲ್ಲಿ ಇದೂವರೆಗೆ ಕೊರೋನಾ ಪಾಸಿಟಿವ್ ಪತ್ತೆಯಾದ 52 ಜನರಲ್ಲಿ ಒಟ್ಟು 8 ಜನ ರೋಗಿಗಳು ಕೊರೋನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದಂತೆ 5 ಜನ ನಿಧನ ಹೊಂದಿದ್ದು, 39 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.