ಪೋರ್ಟಿಸ್ ಆಸ್ಪತ್ರೆಯ ಅಟೆಂಡರ್‌ನಿಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ

ಶನಿವಾರ, 31 ಅಕ್ಟೋಬರ್ 2015 (14:37 IST)
ಚಿಕಿತ್ಸೆಗೆಂದು ದಾಖಲಾಗಿದ್ದ ಮಹಿಳೆಯೋರ್ವಳ ಮೇಲೆ ಆಸ್ಪತ್ರೆಯ ಜವಾನನೋರ್ವ ಲೈಂಗಿಕ ದೌರ್ಜನ್ಯ ಎಲಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 
 
ಹೌದು, ನಗರದ ಪ್ರತಿಷ್ಠಿತ ಆಸ್ಪತ್ರೆ ಎಂದೇ ಹೇಳಲಾಗುವ ಫೋರ್ಟಿಸ್ ಆಸ್ಪತ್ರೆಯ ಸಿಬ್ಬಂದಿಯಾಗಿರುವ ಜವಾನ ಶಿವಕುಮಾರ್ ಎಂಬಾತ ಚಿಕಿತ್ಸೆಗೆಂದು ದಾಖಲಾಗಿದ್ದ ವಿವಾಹಿತ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಮೂಲಕ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. 
 
ಈ ಸಂಬಂಧ ಕಳೆದ ಅ.6ರಂದೇ ಸಂತ್ರಸ್ತ ಮಹಿಳೆ ದೂರು ನೀಡಿದ್ದಾಳೆ ಎಂದಿರುವ ಹೈಗ್ರೌಂಡ್ ಠಾಣೆ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. 
 
ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಕಾರಣ ಐವತ್ತು ವರ್ಷದ ಮಹಿಳೆಯೊಬ್ಬರು ನಗರದ ಕನ್ನಿಂಗ್ ಹ್ಯಾಂ ರಸ್ತೆಯಲ್ಲಿರುವ ಈ ಪೋರ್ಟಿಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಳು. ಈ ವೇಳೆಯಲ್ಲಿ ಅಟೆಂಡರ್ ಶಿವಕುಮಾರ್ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಚಿಕಿತ್ಸೆಗೆಂದು ದಾಖಲಾಗಿದ್ದ ಮಹಿಳೆಯೊಬ್ವರ ಮೇಲೆ ಆಸ್ಪತ್ರೆಯ ಸಿಬ್ಬಂದಿಯೇ ಲೈಂಗಿಕ ದೌರ್ಜನ್ಯವೆಸಗಿರುವ ಪ್ರಕರಣ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ದಾಖಲಾಗಿದೆ. 

ವೆಬ್ದುನಿಯಾವನ್ನು ಓದಿ