ಸರಿಯಾದ ಚಿಕಿತ್ಸೆ ಸಿಗದೆ ಕ್ವಾರಂಟೈನಲ್ಲಿದ್ದ ಗರ್ಭಿಣಿಯ ಹೊಟ್ಟೆಯಲ್ಲೇ ಮಗು ಸಾವು

ಗುರುವಾರ, 28 ಮೇ 2020 (09:15 IST)
ಮಂಗಳೂರು : ಕ್ವಾರಂಟೈನಲ್ಲಿದ್ದ ಗರ್ಭಿಣಿನಿಗೆ ಸರಿಯಾದ ಚಿಕಿತ್ಸೆ ನೀಡದ ಕಾರಣ ಗರ್ಭಿಣಿಯ ಹೊಟ್ಟೆಯಲ್ಲೇ ಮಗು ಮೃತಪಟ್ಟಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.


ಗರ್ಭಿಣಿ ಮೇ.12ರಂದು ದುಬೈನಿಂದ ವಿಮಾನದಲ್ಲಿ ದಕ್ಷಿಣ ಕನ್ನಡದ ಮಂಗಳೂರು ಏರ್ ಪೋರ್ಟ್ ಗೆ ಬಂದಿದ್ದರು. ಬಳಿಕ ಗರ್ಭಿಣಿಯನ್ನು ಹೋಟೆಲ್ ಕ್ವಾರಂಟೈನ್ ಮಾಡಲಾಗಿತ್ತು. ಗರ್ಭಿಣಿಗೆ ಕೊರೊನಾ ನೆಗೆಟಿವ್ ಬಂದಿದ್ದರೂ ಕೂಡ ಆಕೆಯನ್ನು ಕ್ವಾರಂಟೈನ್ ನಲ್ಲಿಡಲಾಗಿತ್ತು.  ಈ ವೇಳೆ ಖಾಸಗಿ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡಲು ನಿರಾಕರಣೆ ಮಾಡಿದ ಕಾರಣ ಸರಿಯಾದ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮೃತಪಟ್ಟಿದೆ ಎನ್ನಲಾಗಿದೆ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ