ಕೇಂದ್ರದಿಂದ ನೆರೆ ಪರಿಹಾರ ಘೋಷಣೆ ಮಾಡದ ಹಿನ್ನಲೆ; ಇಂದು ಬೃಹತ್​​ ‍ಪ್ರತಿಭಟನೆ ನಡೆಸಿದ ಸಂಘ- ಸಂಸ್ಥೆಗಳು

ಗುರುವಾರ, 3 ಅಕ್ಟೋಬರ್ 2019 (11:16 IST)
ಬೆಂಗಳೂರು : ಉತ್ತರ ಕರ್ನಾಟಕ ಜನರಿಗೆ ಇನ್ನು ನೆರೆ ಸಂತ್ರಸ್ತರಿಗೆ ಸರ್ಕಾರ ಪರಿಹಾರ ಘೋಷಣೆ ಮಾಡದ ಹಿನ್ನಲೆಯಲ್ಲಿ ಇಂದು ಸರ್ಕಾರದ ವಿರುದ್ಧ ಉತ್ತರ ಕರ್ನಾಟಕ ಸಂಘ- ಸಂಸ್ಥೆಗಳ ಮಹಾ ಸಂಸ್ಥೆಯಿಂದ ಬೃಹತ್​​ ‍ರ್ಯಾಲಿ ಹಮ್ಮಿಕೊಳ್ಳಲಾಗಿದೆ.




ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ ಅವರು ಪ್ರತಿಭಟನೆಗೆ ಚಾಲನೆ ನೀಡಿದ್ದು, ಬೆಳಿಗ್ಗೆ 9.30ಕ್ಕೆ ರಾಜಾಜಿನಗರದ ಬಾಷ್ಯಂ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಾಮಮಂದಿರ ಮಾರ್ಗವಾಗಿ ಸಾತಂತ್ರ್ಯ ಉದ್ಯಾನವನದ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಾಗಿದೆ. ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಭಾಗದ ಹಲವಾರು ಸಂಘ ಸಂಸ್ಥೆಗಳ ಸಾವಿರಾರು ಜನ ಸದಸ್ಯರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ.


ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಪ್ರವಾಹದಿಂದ ಜನ ತತ್ತರಿಸಿದ್ದಾರೆ. ಮನೆ - ಮಠ ಕಳೆದುಕೊಂಡು ನಿರ್ಗತಿಕರಾಗಿದ್ದು, ಬದುಕು ದುಸ್ಥರವಾಗಿದೆ. ಆದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡಿಗಾಸೂ ನೀಡಿಲ್ಲ. ನೆರೆ ಪೀಡಿತರ ಕಣ್ಣೀರು ಒರೆಸುವ ಪ್ರಯತ್ನ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಈ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ