ವ್ಯಕ್ತಿಯೋರ್ವನ ಬರ್ಬರ ಹತ್ಯೆ

ಶನಿವಾರ, 20 ಆಗಸ್ಟ್ 2022 (21:12 IST)
ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ ಮಾಡಲಾದ ಭೀಭತ್ಸ ಘಟನೆಯೊಂದು ನಡೆದಿದೆ. ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಬೆಟಗೇರಾ (ಬಿ) ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸತೀಶ್ ಬಂಗಿ (25) ಹತ್ಯೆಯಾದ ವ್ಯಕ್ತಿಯಾಗಿದ್ದಾನೆ. ತಡರಾತ್ರಿ ಸತೀಶ್‌ನನ್ನ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಹತ್ಯೆ ನಡೆದಿರೋ ಶಂಕೆ ವ್ಯಕ್ತವಾಗ್ತಿದೆ. ಆದರೆ ತನಿಖೆ ನಂತರವಷ್ಟೇ ಸತ್ಯಾಂಶ ಹೊರ ಬರಬೇಕಿದೆ. ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ