ಬಂದ್ ಗೆ ಯಾದಗಿರಿಯಲ್ಲಿ ನೀರಸ ಪ್ರತಿಕ್ರಿಯೆ

ಮಂಗಳವಾರ, 8 ಜನವರಿ 2019 (17:18 IST)
ಭಾರತ ಬಂದ್ ಹಿನ್ನಲೆ ಯಾದಗಿರಿಯಲ್ಲಿ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಆದರೆ ಬಂದ್ ಗೆ ಜನರ ನೀರಸ ಪ್ರತಿಕ್ರಿಯೆ ವ್ಯಕ್ತಪಡಿಸಿದರು. 

ಯಾದಗಿರಿ ನಗರದ ರೈಲ್ವೆ ಸ್ಟೇಷನ್ ದಿಂದ ಸುಭಾಷ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. AIUTUC, CITUC, JCTUC ಕಾರ್ಮಿಕ ಜಂಟಿ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಸುಮಾರು ಐದು ನೂರಕ್ಕೂ ಹೆಚ್ಚು ಕಾರ್ಮಿಕರು ಭಾಗಿಯಾಗಿದ್ದರು. ಈ ವೇಳೆ ಬೆಲೆ ಏರಿಕೆ ನೀತಿ ಖಂಡಿಸಿ, ವೇತನ ಹೆಚ್ಚಳ ಸೇರಿದಂತೆ ಇತರ ಬೇಡಿಕೆಗೆ ಒತ್ತಾಯಿಸಿ, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಬಿರು ಬಿಸಿಲನ್ನು ಲೆಕ್ಕಿಸದೆ ರಸ್ತೆ ಮೇಲೆ ಕುಳಿತು ಪ್ರತಿಭಟನೆಗೆ ಸಾಥ್ ನೀಡಿದರು.

ನಾಳೆಯು ಇದೇ ರೀತಿ ಬೃಹತ್ ಪ್ರತಿಭಟನೆ ನಡೆಸಲಾಗುವುದು, ಸಾರ್ವಜನಿಕರು ಸಹಕರಿಸಿಬೇಕು. ಕಾರ್ಮಿಕರ ಹನ್ನೆರಡು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಾನ್ಯ ಜಿಲ್ಲಾಧಿಕಾರಿ ಮೂಲಕ ರಾಷ್ಟಪತಿಗೆ ಮನವಿ ಸಲ್ಲಿಸಿದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ