ನಿಂತಿದ್ದ ಲಾರಿಗೆ ಬಸ್ ಡಿಕ್ಕಿ; ಇಬ್ಬರು ಸಾವು

ಭಾನುವಾರ, 24 ಸೆಪ್ಟಂಬರ್ 2023 (19:00 IST)
ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ, ಅಪಘಾತ ಪ್ರಕರಣದಲ್ಲಿ ಗಾಯಗೊಂಡಿದ್ದ ಇಬ್ಬರು ಪ್ರಯಾಣಿಕರು ಇಂದು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ರಾಯಚೂರಿನ ಸಿಂಧನೂರಿನ ಮಲ್ಲದಗುಡ್ಡ ಗ್ರಾಮದ ಬಳಿ ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, 18 ವರ್ಷದ ಸುದೀಪ್, 60 ವರ್ಷದ ರಾಮಪ್ಪ ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಿಂಧನೂರಿನಿಂದ ಅಂಕಲಿಮಠದ ಕಡೆಗೆ ಹೊರಟಿದ್ದ ಬಸ್ ಲಾರಿಗೆ ಡಿಕ್ಕಿ ಹೊಡೆದಿದೆ. ಇಂಡಿಕೇಟರ್ ಹಾಕದೆ ರಸ್ತೆ ಪಕ್ಕದಲ್ಲಿ ಲಾರಿ ನಿಲ್ಲಿಸಿದ್ದೇ ಅಪಘಾತಕ್ಕೆ ಕಾರಣವಾಗಿದ್ದು, ಘಟನೆಯಲ್ಲಿ ನಿರ್ವಾಹಕ ಸೇರಿ 5 ಜನರ ಸ್ಥಿತಿ ಗಂಭೀರವಾಗಿತ್ತು. ಹಾಗೂ ಬಸ್‌ನಲ್ಲಿದ್ದ 32 ಜನರಿಗೆ ಗಾಯಗಳಾಗಿದ್ದು, ಬಳ್ಳಾರಿ ವಿಮ್ಸ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಬಸ್ ಚಾಲಕ ಅಮರೇಶ್ ,ಲಾರಿ ಚಾಲಕ ನಾಗೇಶ್ವರರಾವ್ ವಿರುದ್ಧ ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ