ಒಂಟಿ ಮನೆ ಟಾರ್ಗೆಟ್‌ ಮಾಡಿ, ಮನೆ ಬಾಡಿಗೆ ನೆಪದಲ್ಲಿ ಚಿನ್ನ ಎಗರಿಸುತ್ತಿದ್ದ ದಂಪತಿ ಅರೆಸ್ಟ್‌

Sampriya

ಭಾನುವಾರ, 10 ನವೆಂಬರ್ 2024 (17:20 IST)
Photo Courtesy X
ನೆಲಮಂಗಲ:  ಮನೆ ಬಾಡಿಗೆ ಕೇಳುವ ನೆಪದಲ್ಲಿ ಚಿನ್ನ ಎಗರಿಸುತ್ತಿದ್ದ ದಂಪತಿಯನ್ನು ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂಧ 17ಲಕ್ಷ ಮೌಲ್ಯದ 240 ಗ್ರಾಂ ಚಿನ್ನಾಭರಣ ಹಾಗೂ 90ಗ್ರಾಂ ಬೆಳ್ಳಿ ಜಪ್ತಿ ಮಾಡಲಾಗಿದೆ.

ಬಂಧಿತ ದಂಪತಿಯನ್ನು  ಜೀವನ್ ಅಲಿಯಾಸ್ ಜೀವ (30),  ಆಶಾ (30) ಎಂದು ಗುರುತಿಸಲಾಗಿದೆ. ಇದುವರೆಗೆ ದಂಪತಿ ವಿರುದ್ಧ 15 ಪ್ರಕರಣಗಳು ದಾಖಲಾಗಿದೆ.

ಬಂಧಿತ ದಂಪತಿ ವಿರುದ್ಧ ದರೋಡೆ, ಕೊಲೆ, ಕೊಲೆಯತ್ನ ಸೇರಿ ಒಟ್ಟು 15 ಪ್ರಕರಣಗಳು ದಾಖಲಾಗಿದ್ದವು. 2024ರ ಫೆ.13ರಂದು ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀಪುರದಲ್ಲಿ ವೃದ್ಧೆ ಭಾಗ್ಯಮ್ಮ ಕೊಲೆಯಾಗಿತ್ತು. ಕೊಲೆ ಬಳಿಕ ಸಂಪ್​ನಲ್ಲಿ ಮೃತದೇಹ ಹಾಕಿ ದಂಪತಿ ಪರಾರಿಯಾಗಿದ್ದರು.

ಕೇಂದ್ರ ವಲಯ ಐಜಿಪಿ ಲಾಬುರಾಮ್​ ಸೂಚನೆ ಮೇರೆಗೆ ತಾವರೆಕೆರೆ ಇನ್ಸ್​ಪೆಕ್ಟರ್​ ಮೋಹನ್ ನೇತೃತ್ವದಲ್ಲಿ ಕಾರ್ಯಾಚರಣೆಗೆ ಇಳಿಯಲಾಗಿತ್ತು. ಈ ವೇಳೆ ಹೊಸಕೋಟೆ ಬಳಿ ಮತ್ತೊಂದು ಕೃತ್ಯವೆಸಗುವ ವೇಳೆ ಪೊಲೀಸರ ಬಲೆಗೆ ಬಿದಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ