ಮಾವುತರು, ಕಾವಾಡಿಗರಿಗೆ ಹಬ್ಬದೂಟ
ವಿಶ್ವ ವಿಖ್ಯಾತ ಮೈಸೂರು ದಸರಾದ ಕೇಂದ್ರ ಬಿಂದು ಗಜಪಡೆಯ ಮಾವುತರು ಮತ್ತು ಕಾವಾಡಿಗಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅರಮನೆ ಆವರಣದಲ್ಲಿ ಉಪಾಹಾರ ವ್ಯವಸ್ಥೆ ಮಾಡಿದರು. ಸಿದ್ದಗೊಂಡ ವಿಶೇಷ ಉಪಾಹಾರವನ್ನು ಮಾವುತರು ಮತ್ತು ಕಾವಾಡಿಗಳಿಗೆ ಶೋಭಾ ಕರಂದ್ಲಾಜೆ ಬಡಿಸಿದರು. ಸಚಿವೆಗೆ ಸಂಸದ ಪ್ರತಾಪ್ ಸಿಂಹ ಹಾಗೂ ಸ್ಥಳಿಯ ಬಿಜೆಪಿ ಮುಖಂಡರು ಸಾಥ್ ನೀಡಿದರು.