ಬೆಂಗಳೂರಿನಲ್ಲಿ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ

ಮಂಗಳವಾರ, 28 ಮಾರ್ಚ್ 2023 (14:22 IST)
ಬೆಂಗಳೂರಿನಲ್ಲಿ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ವಿಜಯನಗರದ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮುಂಜಾನೆ 6 ಗಂಟೆ ಸುಮಾರಿಗೆ ಘಟನೆ ನಡೆದಿದ್ದು,ಬೆಂಕಿಯ ಕೆನ್ನಾಲಿಗೆಗೆ ಇಡೀ ಅಂಗಡಿ ಸುಟ್ಟು ಭಸ್ಮವಾಗಿದೆ.ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಬಿದ್ದಿರೋ ಶಂಕೆ ವ್ಯಕ್ತವಾಗಿದೆ.ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಗೆ ಸ್ಥಳೀಯರು ಕರೆ ಮಾಡಿದಾರೆ.ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸೋ ಕೆಲಸವಾಗಿದೆ.ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ