ಓವೈಸಿ ಮುಂದೆಯೇ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದ ಹುಡುಗಿ

ಗುರುವಾರ, 20 ಫೆಬ್ರವರಿ 2020 (20:41 IST)

ಸಂಸದ ಆಸಾದುದ್ದೀನ್ ಓವೈಸಿ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಹುಡುಗಿಯೊಬ್ಬಳು ಪಾಕಿಸ್ತಾನ ಜಿಂದಾಬಾದ್ ಅಂತ ಘೋಷಣೆ ಕೂಗಿದ ಘಟನೆ ನಡೆದಿದೆ.
 

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಸಿಎಎ ಮತ್ತು ಎನ್ಸಿಆರ್ ವಿರೋಧಿಸಿ ಪ್ರತಿಭಟನಾ ಸಭೆ ನಡೆಯುತ್ತಿತ್ತು. ಅಲ್ಲಿ ಚಿಕ್ಕಮಗಳೂರಿನ ಕೊಪ್ಪ ಮೂಲದ ಯುವತಿ ಅಮೂಲ್ಯ ಪಾಕಿಸ್ತಾನಕ್ಕೆ ಜಿಂದಾಬಾದ್ ಅಂತ ಘೋಷಣೆ ಕೂಗಿದ್ದಾಳೆ.

ಆಗ ಅಲ್ಲೇ ಇದ್ದ ಓವೈಸಿ ಆಕೆಯನ್ನು ತಡೆದಿದ್ದಾರೆ. ಪೊಲೀಸರು ಯುವತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಾವು ಆಕೆಯನ್ನು ಕರೆದಿಲ್ಲ. ನಾವು ಪಾಕ್ ಪರ ಜೈಕಾರ ಹಾಕೋದಿಲ್ಲ ಅಂತ ಓವೈಸಿ ಸ್ಪಷ್ಟಪಡಿಸಿದ್ದಾರೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ