ಮುಂಡಗೋಡು: ಅಂಗನವಾಡಿಯಲ್ಲಿ ಮೂತ್ರ ವಿಸರ್ಜನೆಗೆಂದು ಹಿಂಬದಿಗೆ ತೆರಳಿದ್ದ ಐದು ವರ್ಷದ ಬಾಲಕಿಗೆ ಹಾವು ಕಡಿದು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.
ಈ ಘಟನೆ ಪಟ್ಟಣದ ಮಾರಿಕಾಂಬಾ ನಗರದ ಅಂಗನವಾಡಿಯಲ್ಲಿ ನಡೆದಿದೆ. ಐದು ವರ್ಷದ ಬಾಲಕಿ ಮಯೂರಿ ಸುರೇಶ ಕುಂಬಳೆಪ್ಪನವರ ಹಾವು ಕಡಿತದಿಂದ ಸಾವನ್ನಪ್ಪಿದ್ದಾಳೆ.
ಅಂಗನವಾಡಿಗೆ ಹೋಗಿದ್ದ ಮಯೂರಿ ಮೂತ್ರ ವಿಸರ್ಜನೆಗೆಂದು ಹೊರಗಡೆ ಹೋಗಿದ್ದಾಳೆ. ಈ ವೇಳೆ ಹಾವು ಕಡಿದಿದೆ. ರಕ್ತಸ್ರಾವ ಆಗುತ್ತಿರುವುದನ್ನು ಕಂಡ ಅಂಗನವಾಡಿ ಸಿಬ್ಬಂದಿ ಕೂಡಲೇ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್‌ಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾಳೆ. ಬಾಲಕಿ ಮೃತಪಟ್ಟಿರುವುದನ್ನು ಕಿಮ್ಸ್ ವೈದ್ಯರು ದೃಢಪಡಿಸಿದ್ದಾರೆ.