ಕರ್ನಾಟಕ ಎಂಬ ಹೆಸರಿಗೆ ಸುವರ್ಣ ಸಂಭ್ರಮ

geetha

ಮಂಗಳವಾರ, 16 ಜನವರಿ 2024 (19:22 IST)
ಬೆಂಗಳೂರು: ಕರ್ನಾಟಕ ನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನ (Police complex) ಕಟ್ಟಡ ನಿರ್ಮಾಣಕ್ಕೆ ಬಜೆಟ್ ನಲ್ಲಿ ಹಣ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಜೊತೆಗೆ ಖಾಲಿ ಇರುವ ಪೊಲೀಸ್ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು ಎಂದೂ ಸಹ ಭರವಸೆ ನೀಡಿದರು.
 
ಇದೇ ವೇಳೆ, ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಮೊಬೈಲ್ ಲ್ಯಾಬ್, ವಿಧಿ ವಿಜ್ಞಾನ ಮೊಬೈಲ್ ಲ್ಯಾಬ್ ವಾಹನ, ಮೊಬೈಲ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ವಾಹನ ದ ಉನ್ನತೀಕರಣದ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು.
 
ಬಳಿಕ ಪೊಲೀಸ್ ಐಟಿ-V2, ITPA ಸರಳ ಆಪ್, ಪೊಲೀಸ್ ಮಿತ್ರ ಚಾಟ್ ಬಾಟ್, CG ನೋಂದಣಿ ಪೋರ್ಟಲ್, ರಾಜ್ಯ ಪೊಲೀಸ್ ಕೃತಕ ಬುದ್ದಿ ಮತ್ತೆ ತಂತ್ರಾಂಶ ಮತ್ತು ಆರ್ಥಿಕ ಇಂಟೆಲಿಜೆನ್ಸ್ ತಂತ್ರಾಂಶಗಳನ್ನು ಬಿಡುಗಡೆ ಮಾಡಿ, ಸಂಕ್ಷಿಪ್ತ ಸೈಬರ್ ಅಪರಾಧ ಕೈಪಿಡಿಯನ್ನು ಲೋಕಾರ್ಪಣೆಗೊಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ